Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜ. 27 ರವರೆಗೆ ವಿಸ್ತರಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜ.27 ರವರಗೆ ವಿಸ್ತರಿಸಲಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶ ಕುರಿತಂತೆ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನಿಂದ ಪಡೆಯಬಹುದು.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ಅಭ್ಯರ್ಥಿಗಳಿಗೆ ರೂ.2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಜನಾಂಗಗಳ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ ನಿಗದಿಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಅಂದರೆ ವೃತ್ತಿಪರ ಮತ್ತು ಸ್ನಾತಕೋತ್ತರ ವ್ಯಾಸಂಗದ ಹೊಸ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜ.27 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿ ಸಲ್ಲಿಸುವ ಅರ್ಜಿಯನ್ನು, ಆಯಾ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ದಾಖಲೆಗಳೊಂದಿಗೆ, ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಛೇರಿಗೆ ಸಲ್ಲಿಸಲು ಜ.28 ಕೊನೆಯ ದಿನವಾಗಿರುತ್ತದೆ.

ಹೊಸ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು, ಆಯ್ಕೆ ಸಮಿತಿಯು ಜ.31 ರಿಂದ ಫೆ.01 ರೊಳಗೆ ಸಭೆ ನಡೆಸಿ, ಆಯ್ಕೆ ಪಟ್ಟಿಯನ್ನು ಫೆ.02 ರಂದು ಪ್ರಕಟಿಸಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು, ವಿದ್ಯಾರ್ಥಿನಿಲಯಕ್ಕೆ ಪ್ರವೇಶವನ್ನು ಫೆ. 02 ರಿಂದ 05 ರ ಒಳಗಾಗಿ ಪಡೆದುಕೊಳ್ಳಬೇಕು. 2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಫೆ.10 ರೊಳಗೆ ಪೂರ್ಣಗೊಳಿಸಲಾಗುವುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಹಾಗೂ ಸಹಾಯವಾಣಿ ಸಂಖ್ಯೆ 080-8050370006 ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top