Connect with us

Dvgsuddi Kannada | online news portal | Kannada news online

ಮುಂಬೈ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ; 7 ಮಂದಿ ಸಜೀವ ದಹನ

mubai

ರಾಷ್ಟ್ರ ಸುದ್ದಿ

ಮುಂಬೈ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ; 7 ಮಂದಿ ಸಜೀವ ದಹನ

ಮುಂಬೈ:  ಕೇಂದ್ರ ಮುಂಬೈನ ವಸತಿ ಕಟ್ಟಡವೊಂದರ 18ನೇ ಮಹಡಿಯಲ್ಲಿ ಇಂದು ಬೆಳಗ್ಗೆ ಉಂಟಾದ ಭಾರಿ ಅಗ್ನಿ ಅನಾಹುತದಲ್ಲಿ ಕನಿಷ್ಠ 7 ಮೃತಪಟ್ಟು ಇತರ 17 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಗೋವಾಲಿಯಾ ಟ್ಯಾಂಕ್‍ನ ಗಾಂ ಆಸ್ಪತ್ರೆ ಎದುರಿನ ಕಮ್ಲಾ ಕಟ್ಟಡದಲ್ಲಿ ಬೆಳಗ್ಗೆ  ಬೆಂಕಿ ಕಾಣಿಸಿಕೊಂಡಿದೆ.  ದು ನೆಲಮಹಡಿ ಮತ್ತು 20 ಅಂತಸ್ತುಗಳುಳ್ಳ ಕಟ್ಟಡ. 18ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಲಭಿಸಿದೊಡನೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.13 ಅಗ್ನಿ ಶಾಮಕ ವಾಹನಗಳು, ಏಳು ವಾಟರ್ ಜೆಟ್ಟೀಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಗಾಯಾಳುಗಳಲ್ಲಿ 15 ಮಂದಿಯನ್ನು ಸಮೀಪದ ಭಾಟಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಅವರು ತುರ್ತು ನಿಗಾ ಘಟಕಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಮುಂದುವರೆದಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top