Connect with us

Dvgsuddi Kannada | online news portal | Kannada news online

ದಾವಣಗೆರೆ: ಜ.24 ರಂದು ಅಮರ್ ಜವಾನ್ ಸ್ಮಾರಕದ ಎರಡನೇ ಹಂತದ ಕಾಮಗಾರಿ ಉದ್ಘಾಟನೆ

IMG 20220123 WA0005 696x338 1

ದಾವಣಗೆರೆ

ದಾವಣಗೆರೆ: ಜ.24 ರಂದು ಅಮರ್ ಜವಾನ್ ಸ್ಮಾರಕದ ಎರಡನೇ ಹಂತದ ಕಾಮಗಾರಿ ಉದ್ಘಾಟನೆ

ದಾವಣಗೆರೆ: ನಗರದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಅಮರ್ ಜವಾನ್ ಸ್ಮಾರಕದ 2ನೇ ಹಂತದ ಕಾಮಗಾರಿಯ ಉದ್ಘಾಟನಾ ಸಮಾರಂಭ ಜ.24ರಂದು ನಡೆಯಲಿದೆ ಎಂದು ಜಿಲ್ಲಾ ಮಾಜಿ ಸೈನಿಕರ ಸಂಘದ ಸತ್ಯಪ್ರಕಾಶ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ‌. 24ರಂದು ಸ್ಮಾರಕದ 2ನೇ ಹಂತದ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಉದ್ಘಾಟಿಸುವರು. ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಜಿ.ಎಂ.ಸಿದ್ದೇಶ್ವರ, ದೂಢಾ ಅಧ್ಯಕ್ಷ ದೇವರಮನಿ ಶಿವಕುಮಾರ್, ಶಾಸಕ ಪ್ರೊ.ಎನ್.ಲಿಂಗಣ್ಣ, ಡಾ.ಶಾಮನೂರು ಶಿವಶಂಕರಪ್ಪ, ಪಾಲಿಕೆ ಮೇಯರ್ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ದೂಡಾ ಆಯುಕ್ತ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ಮನೋಹರ್ ಮಹೇಂದ್ರಕರ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top