ದಾವಣಗೆರೆ: ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ದಂಪತಿಯಾಗಿದ್ದಾರೆ. ತಡರಾತ್ರಿಕೊಲೆ ನಡೆದಿದದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ನಿನ್ನೆ (ಜ.24) ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ದಂಪತಿಗೆ ಮೂವರು ಹೆಣ್ಣು ಮಕ್ಕಳು ಇದ್ದು ಎಲ್ಲರಿಗೂ ಮದುವೆ ಮಾಡಿಕೊಟ್ಟಿದ್ದಾರೆ. ಮನೆಯಲ್ಲಿ ಪತಿ-ಪತ್ನಿ ಇಬ್ಬರೇ ವಾಸವಾಗಿದ್ದರು. ಪಕ್ಕದ ಮನೆಯವರು ಇಂದು ಬೆಳಗ್ಗೆ ಸರೋಜಮ್ಮ ಅವರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್,ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿರಾಮಗೊಂಡ ಬಸರಗಿ,ಗ್ರಾಮಾಂತರ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.



