ಡಿವಿಜಿ ಸುದ್ದಿ ಮುಂಬೈ: ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮಹಾರಾಷ್ಟ ರಾಜ್ಯ ರಾಜಕಾರಣದಲ್ಲಿ ಬಿಗ್ ಶಾಕಿಂಗ್ ಉಂಟಾಗಿದೆ. ಅದರಲ್ಲೂ `ಮಹಾ’ ಮೈತ್ರಿ ಸರ್ಕಾರ ರಚಿಸಲು ಮುಂದಾಗಿದ್ದ ಶಿವಸೇನೆ ಹಾಗೂ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ.
ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ಸಿಗೆ ಶಾಕ್ ಕೊಟ್ಟ ಎನ್ ಸಿಪಿ, ಬಿಜೆಪಿ ಜೊತೆ ಸೇರಿದೆ. ಈ ಮೂಲಕ ಬಿಜೆಪಿ ಸರ್ಕಾರ ರಚಿಸಿದೆ. ಬೆಳಗ್ಗೆ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಿನ್ನೆಯಷ್ಟೇ ಉದ್ಧವ್ ಠಾಕ್ರೆಗೆ ಮುಖ್ಯಮಂತ್ರಿ ಪಟ್ಟಕಟ್ಟಲು ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದವು. ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ರಾತ್ರಿಯೇ ಅಲರ್ಟ್ ಆಗಿ ಎನ್ ಸಿಪಿಯ ಅಜಿತ್ ಪವಾರ್ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದೆ.
ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ವಾಪಸ್ಸು ಪಡೆಯಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ, ಎನ್ ಸಿಪಿ ಜೊತೆ ಸೇರಿ ಸರ್ಕಾರ ರಚನೆಯಾಗಿದೆ. ಶುಕ್ರವಾರವರಷ್ಟೇ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್‍ಸಿಪಿ ನಡುವಿನ ಚರ್ಚೆಗಳು ಕೊನೆ ಹಂತ ತಲುಪಿದ್ದು, ಇಂದು ಎನ್‍ಸಿಪಿ ಬಿಜೆಪಿ ಜೊತೆ ಕೈಜೋಡಿಸಿ ಸರ್ಕಾರ ರಚನೆ ಮಾಡಿದೆ. ಪ್ರಮಾಣ ವಚನ ಸ್ವೀಕರದ ನಂತರ ಬಹುಮತ ಸಾಬೀತು ಪಡಿಸಲು ಮೈತ್ರಿ ಸರ್ಕಾರಕ್ಕೆ 8 ದಿನಗಳ ಕಾಲವಕಾಶ ನೀಡಲಾಗಿದೆ.

ಮಹಾರಾಷ್ಟರದ ಒಟ್ಟು 288 ಸೀಟ್‍ನಲ್ಲಿ ಬಿಜೆಪಿ 105 ಸ್ಥಾನ, ಶಿವಸೇನೆ 56 ಸ್ಥಾನ, ಎನ್‍ಸಿಪಿ 54 ಸ್ಥಾನ ಹಾಗೂ ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು. ಸರ್ಕಾರ ರಚನೆಗೆ 145 ಮ್ಯಾಜಿಕ್ ನಂಬರ್ ಆಗಿತ್ತು. ಯಾವುದೇ ಪಕ್ಷ ಬಹುಮತ ಸಾಬೀತು ಪಡಿಸಲು ಸಾಧ್ಯವಾಗದ ಹಿನ್ನೆಲೆ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು. ಆದರೆ, ಬಿಜೆಪಿಯೊಂದಿಗಿನ ದೀರ್ಘ ಕಾಲ ಮೈತ್ರಿ ಬಿಟ್ಟು ಎನ್ ಸಿಪಿ ಹಾಗೂ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಲು ಶಿವಸೇನೆ ಮುಂದಾಗಿತ್ತು.
ಶಿವ ಸೇನೆಯ ನಡೆಯನ್ನು ಸೂಕ್ಷ್ಮವಾಗಿ ಗಮನಿಸಿದ ಬಿಜೆಪಿ ರಾತ್ರೋ ರಾತ್ರಿ ಎನ್ ಸಿಪಿಯ ಅಜಿತ್ ಪವಾರ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದೆ. ಸದ್ಯ ಅಜಿತ್ ಪವಾರ್ ಜೊತೆ 22 ಶಾಸಕರು ಬೆಂಬಲಕ್ಕೆ ನಿಂತಿದ್ದಾರೆ ಎಂದು ಗೊತ್ತಾಗಿದೆ. 105 ಮತ್ತು 22 ಸೇರಿಸಿದರೆ 127 ಸ್ಥಾನಗಳು ಆಗುತ್ತವೆ. ಮ್ಯಾಜಿಕ್ ನಂಬರ್ ತಲುಪಲು ಇನ್ನು 18 ಸ್ಥಾನ ಕೊರತೆ ಬೀಳಲಿದ್ದು, ಬಹುಮತ ಸಾಬೀತು ಪಡಿಸಲು ಬಿಜೆಪಿ ಇನ್ಯಾವ ಮಾಸ್ಟರ್ ಸ್ಟ್ರೋಕ್ ಮಾಡುತ್ತೋ ಎಂಬುದನ್ನು ಕಾದು ನೋಡಬೇಕಿದೆ.



