ದಾವಣಗೆರೆ: ಜಿಲ್ಲೆಯಲ್ಲಿಂದು 126 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 123 ಮಂದಿ ಕೊರೊನಾದಿಂದ ಡಿಸ್ಚಾರ್ಜ್ ಆಗಿದ್ದಾರೆ . ದಾವಣಗೆರೆ 48, ಹರಿಹರ 09, ಜಗಳೂರು 13, ಚನ್ನಗಿರಿ 11, ಹೊನ್ನಾಳಿ 38, ಹೊರ ಜಿಲ್ಲೆಯಿಂದ ಬಂದ 07 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.ಜಿಲ್ಲೆಯಲ್ಲಿ ಸದ್ಯ 1,591 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.



