ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯ ಕಾಂಗ್ರೆಸ್ ಜನ ಪ್ರತಿನಿಧಿಗಳಿಗೆ ನ. 24 ರಂದು ನಗರದ ಎಂಬಿಎ ಕಾಲೇಜು ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ ಅವರು ತಿಳಿಸಿದ್ದಾರೆ.
ಬೆಳಿಗ್ಗೆ 9.30ಕ್ಕೆ ಕಾಂಗ್ರೆಸ್ ಹಿರಿಯರು, ಶಾಸಕರಾದ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾಗಿಯಾಗಲಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಅಂತರಾಷ್ಟ್ರೀಯ ತರಬೇತುದಾರ ಚೇತನ್‍ರಾಮ್ ಹಾಗೂ ಜೆಸಿಐ ರಾಷ್ಟ್ರೀಯ ತರಬೇತುಗಾರ್ತಿ ಲತಿಕಾ ದಿನೇಶ್ ಕೆ.ಶೆಟ್ಟಿ ಅವರು ತರಬೇತಿ ನೀಡಲಿದ್ದಾರೆ. ದಾವಣಗೆರೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಹಾಗು ವಿವಿಧ ಘಟಕಗಳ ಅಧ್ಯಕ್ಷರುಗಳು ಭಾಗವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕೋರಿದೆ.



