ಚಿತ್ರದುರ್ಗ: ಟೋಲ್ ಗೇಟ್ನಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಕಾರು ಡಿಕ್ಕಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಜಿಲ್ಲೆಯ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳುನಲ್ಲಿ ಸಂಭವಿಸಿದೆ.
ಇಂದು ಬೆಳಗ್ಗೆ ಗುಯಿಲಾಳು ಟೋಲ್ ಗೇಟ್ನಲ್ಲಿ ಗ್ಯಾಸ್ ಟ್ಯಾಂಕರ್ ನಿಂತಿತ್ತು.ವೇಗವಾಗಿ ಬಂದ ಕಾರು ಹಿಂಬದಿಯಿಂದ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಸ್ಥಳೀಯ ಶವಾಗಾರಕ್ಕೆ ರವಾನಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



