ಡಿವಿಜಿ ಸುದ್ದಿ, ದಾವಣಗೆರೆ: ಎಲ್ಲಾ ಬಂಡಾಯ ಅಭ್ಯರ್ಥಿಗಳ ಬೆಂಬಲ ಬಿಜೆಪಿಗಿದ್ದು, ಈ ಬಾರಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯುವುದು ನೂರಕ್ಕೆ ನೂರಷ್ಟು ಸತ್ಯ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡಾಯ ಅಭ್ಯರ್ಥಿಯಾಗಿದ್ದವರು ಪಕ್ಷ ಬಿಡಲ್ಲ ಅಂತಾ ಹೇಳಿದ್ದಾರೆ. ಎಲ್ಲಾ ಬಂಡಾಯ ಅಭ್ಯರ್ಥಿಗಳ ಸಹಕಾರದಿಂದ ಈ ಬಾರಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಲಿದೆ. ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ಬಂಡಾಯ ಅಭ್ಯರ್ಥಿಗಳ ವಿಶ್ವಾಸ ಗಳಿಸಿ ಆಡಳಿತ ನಡೆಸಲಿದ್ದೇವೆ ಎಂದರು.

ಯಾವಾಗ ಮೇಯರ್ ಚುನಾವಣೆ ನಡೆಯುತ್ತೇ ಎಂಬುದು ಗೊತ್ತಿಲ್ಲ. ಮೇಯರ್ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರ ನಿರ್ಧರಿಸಲಿದೆ. ಮೇಯರ್ ಯಾವುದೇ ಕೆಟಗೆರಿ ಬಂದರೂ ಪರವಾಗಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ಇರುವ ಕಾರಣದಿಂದ ಮೇಯರ್ ಚುನಾವಣೆ ಸ್ವಲ್ಪ ತಡವಾಗಿದೆ . ಈ ಬಾರಿ ಹೊಸಬರಿಗೆ ಆದ್ಯತೆ ನೀಡಲಾಗಿತ್ತು. 17 ವಾರ್ಡ್ ಗಳಲ್ಲಿ ಬಿಜೆಪಿ ಗೆದ್ದಿದೆ ಎಂದರು.
ಜನ ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 1 ಸಾವಿರ ಕೋಟಿಯಲ್ಲಿ ಕೇವಲ 100 ಕೋಟಿ ಹಣ ಮಾತ್ರ ಖರ್ಚು ಮಾಡಿ ಉಳಿದ ಹಣ ಹಾಗೆಯೇ ಕೊಳೆಯುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಬಿ.ಜಿ. ಸಂಗಜ್ಜ ಗೌಡ್ರು, ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ , ಪಾಲಿಕೆ ಸದಸ್ಯ ಎಸ್.ಟಿ. ವೀರೇಶ್, ಮುಖಂಡರಾದ ಉಮೇಶ್ ಪಾಟೀಲ್, ಶಿವರಾಜ್ ಪಾಟೀಲ್ ಉಪಸ್ಥಿತರಿದ್ದರು.



