Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ ಮಂಜೂರಾತಿ‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

home

ದಾವಣಗೆರೆ

ದಾವಣಗೆರೆ: ಮನೆ ಮಂಜೂರಾತಿ‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ 2021-22 ನೇ ಸಾಲಿಗೆ ರಾಜೀವ್‍ಗಾಂಧಿ ವಸತಿ ನಿಗಮವು ಪರಿಶಿಷ್ಟ ಜಾತಿಯವರಿಗೆ 17 ಹಾಗೂ ಪರಿಶಿಷ್ಟ ಪಂಗಡದವರಿಗೆ 07 ಸೇರಿದಂತೆ ಒಟ್ಟು 24 ಮನೆಗಳ ಗುರಿ.  ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗಕ್ಕೆ 66 ಮತ್ತು ಅಲ್ಪಸಂಖ್ಯಾತರಿಗೆ 10 ಸೇರಿದಂತೆ ಒಟ್ಟು 77 ಮನೆಗಳ ಗುರಿ ನಿಗದಿಪಡಿಸಿದ್ದು. ಅರ್ಜಿ ಸಲ್ಲಿಕೆ ಅವಧಿಯನ್ನು ಫೆ. 25 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನವಾಗಿತ್ತು.  ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಫೆ. 25 ರವರೆಗೆ ವಿಸ್ತರಿಸಲಾಗಿದೆ.  ಅರ್ಹರು ಸೂಕ್ತ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ನಮೂನೆಯಲ್ಲಿ ನಗರಸಭೆಗೆ ಅರ್ಜಿ ಸಲ್ಲಿಸಬಹುದು.

      ಅರ್ಜಿ ಸಲ್ಲಿಸಲು ಖಾಲಿ ನಿವೇಶನ ಹೊಂದಿರಬೇಕು, ಕುಟುಂದ ವಾರ್ಷಿಕ ಆದಾಯ 87600 ರೂ. ಮೀರಿರಬಾರದು. ಗುಡಿಸಲು ವಾಸಿಗಳು, ತಾತ್ಕಾಲಿಕ ಶೇಡ್, ಶಿಥಿಲಗೊಂಡ ಮನೆ, ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವವರು, ಒಂದು ಕೊಣೆಯಿಲ್ಲದ 4ಕ್ಕಿಂತ ಹೆಚ್ಚು ಸದಸ್ಯರುಳ್ಳ ಕುಟುಂಬದವರು ಅರ್ಜಿ ಸಲ್ಲಿಸಲು ಅರ್ಹರು.  ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ನಗರಸಭೆಯ ಅಸೆಸ್‍ಮೆಮಟ್ 2021-22 ನೇ ಸಾಲಿನ ಖಾತಾ ನಕಲು, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಕುಟುಂಬದ ಪಡಿತರ ಚೀಟಿ, ಕುಟುಂಬ ಸದಸ್ಯರ ಆಧಾರ್ ಕಾರ್ಡ್, ಫೋಟೋ, ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ ಲಗತ್ತಿಸಿ ಸಲ್ಲಿಸಬೇಕು.

       ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಸಮಯದಲ್ಲಿ ಆಶ್ರಯ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಹರಿಹರ ಶಾಸಕರು ಹಾಗೂ ನಗರ ಆಶ್ರಯ ಸಮಿತಿ ಅಧ್ಯಕ್ಷರಾದ ಎಸ್. ರಾಮಪ್ಪ ಮತ್ತು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top