ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ಸರ್ಕಾರದ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಇರುವ ತೋಟದಪ್ಪನ ಛತ್ರದ ಪಕ್ಕದಲ್ಲಿರುವ ಮ್ಯಾನ್ ಫೋಬೆಲ್ ಹೋಟಲ್ ಹಾಗೂ ಕನ್ವೆಷನ್ ಸೆಂಟರ್ ನಲ್ಲಿ ಫೆ.25 ರಂದು ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಲಾಗಿದ್ದು, ವಿವಿಧ 40 ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ.
ಜಿಲ್ಲೆಯ ಆಸಕ್ತ ವಿಕಲಚೇತನರು ಉದ್ಯೋಗಮೇಳದಲ್ಲಿ ಭಾಗವಹಿಸಿ ಉದ್ಯೋಗಮೇಳದ ಸದುಪಯೋಗ ಪಡೆಯುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೀರಭದ್ರ ಪಾಟೀಲ್: 6364867795 (placements@samarthanam.org) ಸುಭಾಷ್: 9449864693 (centerheadBangalore@samarathanam.org) ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



