ದಾವಣಗೆರೆ: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಬಹುದಾಗಿದೆ.
ಎಸಿಬಿ ಪೊಲೀಸ್ ನಿರೀಕ್ಷಕ ಎಂ.ಕೆ. ರವೀಂದ್ರ ಅವರು ಫೆ. 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹರಿಹರ ಪ್ರವಾಸಿ ಮಂದಿರ, ಅದೇ ದಿನ ಮಧ್ಯಾಹ್ನ 03 ರಿಂದ ಸಂಜೆ 05 ರವರೆಗೆ ನ್ಯಾಮತಿ ತಹಸಿಲ್ದಾರರ ಕಚೇರಿಯಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರ ದೂರು, ಅಹವಾಲುಗಳನ್ನು ಸ್ವೀಕರಿಸುವರು.
ಎಸಿಬಿ ಪೊಲೀಸ್ ನಿರೀಕ್ಷಕ ಸಿ. ಮಧುಸೂಧನ್ ಅವರು ಫೆ. 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಚನ್ನಗಿರಿ ಪ್ರವಾಸಿ ಮಂದಿರ, ಅದೇ ದಿನ ಮಧ್ಯಾಹ್ನ 03 ರಿಂದ ಸಂಜೆ 05 ರವರೆಗೆ ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರ ದೂರು, ಅಹವಾಲುಗಳನ್ನು ಸ್ವೀಕರಿಸುವರು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ: 08192-236600, ಮೊ: 9480806283 ಅಥವಾ 9480806284 ಕ್ಕೆ ಸಂಪರ್ಕಿಸಬಹುದು ಎಂದು ಎಸಿಬಿ ಪೊಲೀಸ್ ಠಾಣೆ ಡಿವೈಎಸ್‍ಪಿ ಆರ್. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



