ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಗೆದ್ದಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಳ್ಳು , ಮೋಸ ಮಾಡುವಲ್ಲಿ ನಿಸ್ಸೀಮರು. ಈ ಚುನಾವಣೆಯಲ್ಲಿಯೂ ಅದೇ ನಡೆದಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಮಾತನಾಡಿ, ಅಧಿಕಾರ ಪಡೆಯಲು ಇಲ್ಲಿನ ನಿವಾಸಿಗಳಲ್ಲದ ಎಂಎಲ್ ಸಿಗಳು ಮತ ಹಾಕುವುದು ತಪ್ಪು. ಇಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರ ತಪ್ಪೂ ಇದೆ. ಮುಂದೆ ಹೀಗಾಗದಂತೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ತಿಳಿಸಿದರು.



