ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ಯಲ್ಲಿ ನೂತನವಾಗಿ ನಿರ್ಮಿಸಿದ ಕಂದಾಯ ಉಪ ವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಕಂದಾಯ ಸಚಿವ ಆರ್.ಅಶೋಕ ಮತ್ತು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ಇಂದು ಉದ್ಘಾಟನೆ ಮಾಡಿದರು.
ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಸುತ್ತುನಿಧಿ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಸಚಿವದ್ವಯರು ವಿತರಣೆ ಮಾಡಿದರು. ಹೊನ್ನಾಳಿ ಪಟ್ಟಣದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗೆ ಸಚಿವ ಅರ್.ಅಶೋಕ ಮತ್ತು ಬೈರತಿ ಬಸವರಾಜ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್, ಡಿ.ಎಸ್. ಅರುಣ್,ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್, ಹೊನ್ನಾಳಿ ತಾಲೂಕಿನ ಹಲ ಜನಪ್ರತಿನಿಧಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.