ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾ ಶಾಖೆಯ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನಾ ಹಾಗೂ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಮಾ.07 ರಂದು ಸಂಜೆ 05 ಗಂಟೆಗೆ ನಗರದ ರಿಂಗ್ ರಸ್ತೆಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಭೋಜನಾಲಯ ಹಾಗೂ ಮನರಂಜನಾ ಕೇಂದ್ರ ಉದ್ಘಾಟಿಸುವರು. ಸಂಸದ ಡಾ.ಜಿ.ಎಂ. ಸಿದ್ದೇಶ್ವರ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರೆವೇರಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಬಿ.ರಿಷ್ಯಂತ್ ವೆಬ್‍ಸೈಟ್ ಉದ್ಘಾಟಿಸುವರು.
ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಆರ್.ಶ್ರೀನಿವಾಸ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಪಿ.ಮುದ್ದಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಬಿ. ಮಲ್ಲಾಪುರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೌಸರ್ ರೇಷ್ಮಾ ತಹಶೀಲ್ದಾರ್ ಗಿರೀಶ್ ಬಿ.ಎನ್, ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಸಿದ್ದರಾಜು ವೈ.ಎಂ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾ, ತಾಲ್ಲೂಕು ಪದಾಧಿಕಾರಿಗಳು, ನಿರ್ದೇಶಕರು, ನಾಮ ನಿರ್ದೇಶಿತ ಸದಸ್ಯರು, ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಜಿಲ್ಲೆಯ ಸಮಸ್ತ ಅಧಿಕಾರಿ ನೌಕರರು ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.



