ದಾವಣಗೆರೆ: 2021-22ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆ. 28 ಕ್ಕೆ ನಿಗಧಿಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲು ಮನವಿಗಳು ಬಂದ ಕಾರಣ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



