ಡಿವಿಜಿಸುದ್ದಿ.ಕಾಂ
ದಾವಣಗೆರೆ: ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಪ್ರೋತ್ಸಾಹ ಧನ ಒದಗಿಸಲು ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದೆ.
ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಘಟಕಗಳಿಗೆ ಸಹಾಯಧನ ನೀಡುವ ಯೋಜನೆಯಡಿಯಲ್ಲಿ ಗ್ರಾಹಕರಿಗೆ ಒದಗಿಸುವ ಉತ್ಪನ್ನಗಳ ಗುಣಮಟ್ಟ ಕಾಪಾಡುವ ಸಲುವಾಗಿ ಹಾಗೂ ಮಾರುಕಟ್ಟೆ ಮೌಲ್ಯವರ್ಧನೆಗಾಗಿ ಸಾವಯವ ಹಾಗೂ ಶೂನ್ಯ ಬಂಡವಾಳ ಕೃಷಿ ಪ್ರದೇಶದಿಂದ ಉತ್ಪತ್ತಿಯಾಗುವ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ಒದಗಿಸುವ ಉದ್ದೇಶದಿಂದ ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಸೆ.06 ಕೊನೆಯ ದಿನವಾಗಿದ್ದು,ಆಸಕ್ತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ : 9844460336, 7483892205



