ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ನಲ್ಲಿ ಅಂಗನವಾಡಿ, ಆಶಾ, ಗ್ರಾಮ ಸಹಾಯಕರ ಮಾಸಿಕ ಗೌರವಧನವನ್ನು ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ.
ಇದರ ಜತೆಗೆ, ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000 ರೂಪಾಯಿಯಿಂದ 1500 ರೂಗಳ ಹೆಚ್ಚಳ ಮಾಡಲಾಗುವುದು. ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದಿದ್ದಾರೆ.