ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಮಾ. 04) ತಮ್ಮ ಮೊದಲ ಬಜೆಟ್ ಮಂಡಿಸಿದರು. ಸಿಎಂ ಸಮುದಾಯವಾರು ಅನುದಾನ ಹಂಚಿಕೆ ವಿವರ ಇಲ್ಲಿದೆ.
- ಸಮುದಾಯವಾರು ಅನುದಾನ
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ
- ಮರಾಠ ಅಭಿವೃದ್ಧಿ ನಿಗಮದ ಮೂಲಕ 50 ಕೋಟಿ
- ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ
- ಶಿವಶರಣೆ ನಲೂರು ನಿಂಬೆಕ್ಕರವರ ಜನ್ಮಸ್ಥಳ ಅಭಿವೃದ್ಧಿ
- ಶ್ರೀಮಡಿವಾಳ ಮಾಚಿದೇವ ಮೂಲಸ್ಥಾನ ದೇವರಹಿಪ್ಪರಗಿಯನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕ ಯಾತ್ರಾ ಸ್ಥಳವನ್ನಾಗಿ ಮಾರ್ಪಡು
- ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರೀಯ, ಮೇದಾರ, ಕುಂಚಿ, ಕುರ್ಮ, ಪಿಂಜಾರ, ನದಾಫ್, ಕುರುಬ, ಬಲಿಜ, ಈಡಿಗ, ಹಡಪದ ಹಾಗೂ ಇತರೆ ಜನಾಂಗದ ಅಭಿವೃದ್ಧಿಗೆ 400 ಕೋಟಿ
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸ್ಪೋಕನ್ ಇಂಗ್ಲಿಷ್ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು 5 ಕೋಟಿ
- ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸಲು 10 ಕೋಟಿ
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ
- ಜೈನ್, ಸಿಖ್ ಮತ್ತು ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ
- ಅಲ್ಪ ಸಂಖ್ಯಾತರ ಇಲಾಖೆಯಡಿ ಬೀದಿ ಬದಿ ವ್ಯಾಪಾರಿಗಳು, ತಳ್ಳುಗಾಡಿ, ಹೂ ಮಾರಾಟಗಾರರು, ಸಣ್ಣಪುಟ್ಟ ತರಕಾರಿ ಮತ್ತು ಹಣ್ಣು ವ್ಯಾಪಾರಿಗಳಿಗೆ ಹಾಗೂ ಆಟೋ ಚಾಲಕರಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸಹಯೋಗದೊಂದಿಗೆ ಆರ್ಥಿಕ ಸಹಾಯ