ಬೆಂಗಳೂರು: ಹೈಕೋರ್ಟ್‌ನಲ್ಲಿ ಖಾಲಿ ಇರುವ 54 ಶೀಘ್ರಲಿಪಿಗಾರರು ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಪದವಿ ಪಡೆದ ಅಭ್ಯರ್ಥಿಗಳಿಗೂ ಆದ್ಯತೆ ಇರಲಿದೆ. ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 18 ವರ್ಷ ದಾಟಿರಬೇಕು, 35 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗ ಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಅಭ್ಯರ್ಥಿಗಳು ಏ.7 ರೊಳಗೆ ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸ ಬಹುದಾಗಿದ್ದು, ಹೆಚ್ಚಿನ ವಿವರಗಳಿಗೆ https://recruitmenthck.kar.nic.in/hck/acs/home.php ವೆಬ್‌ಸೈಟ್ ಗೆ ಭೇಟಿ ನೀಡಿ



