ಭದ್ರಾವತಿ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ನಿಂಬೆಗೊಂದಿ ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ ವೊಂದು ಜಾರ್ಜಿಂಗ್ ಮಾಡುವಾಗ ಸ್ಪೋಟಗೊಂಡು ಸುಟ್ಟು ಕರಕಲಾಗಿದೆ. ಗ್ರಾಮದ ಮಲ್ಲಿಕಾರ್ಜುನ ಎಂಬವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ತಮ್ಮ ಅಡಿಕೆ ಮನೆಯಲ್ಲಿ ಬ್ಯಾಟರಿ ಚಾರ್ಜಿಂಗ್ ಹಾಕಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಬ್ಯಾಟರಿ ಸ್ಪೋಟಗೊಂಡು ಬೈಕ್ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಸ್ಟೋಟದ ರಭಸಕ್ಕೆ ಅಡಿಕೆ ಮನೆಯ ವಸ್ತುಗಳು ಬೆಂಕಿಗೆ ಸುಟ್ಟು ಹೋಗಿವೆ. ಎಲ್ಲೇ ಮಲಗಿದ್ದ ಮಲ್ಲಿಕಾರ್ಜುನ್ ಅವರ ಮಗ ಕಿರಣ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಫೋಟದಿಂದ ಎಚ್ಚರಗೊಂಡು ನೋಡಿದಾಗ ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.



