ಡಿವಿಜಿ ಸುದ್ದಿ, ಮುಂಬೈ: ಸುಪ್ರೀಂ ಕೋರ್ಟ್ ನಾಳೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಮಹಾರಾಷ್ಟದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಎನ್ ಸಿಪಿ ನಾಯಕ ಶರದ್ ಪವಾರ್ ನಡೆಸಿರುವ ಸಂಧಾನ ಯಶಸ್ವಿಯಾಗಿದ್ದು, ಅಜಿತ್ ಪವಾರ ಮರಳಿ ಎನ್ ಸಿಪಿ ಕಡೆ ವಾಲಿದ್ದಾರೆ.
ಬಹುಮತ ಯಾಚನೆಗೂ ಮುನ್ನವೇ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಪಕ್ಷಕ್ಕೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿಗೆ ಬೆಂಬಲ ಘೋಷಿಸಿ ದೇವೇಂದ್ರ ಫಡ್ನವೀಸ್ ಜೊತೆಯಲ್ಲಿ ಅಜಿತ್ ಪವಾರ್ ಭಾನುವಾರ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಅಜಿತ್ ಪವಾರ್ ಗೆ ಬೆಂಬಲ ನೀಡಿದ್ದ ಶಾಸಕರು ಮಾತೃಪಕ್ಷಕ್ಕೆ ಹಿಂದಿರುಗಿದ್ದರು. ಇಂದು ಸುಪ್ರೀಂಕೋರ್ಟ್ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ಈ ಬೆನ್ನಲ್ಲೇ ಅಜಿತ್ ಪವಾರ್ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ.



