ದಾವಣಗೆರೆ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಮಾ.22 ರಂದು ಯು.ಬಿ.ಡಿ.ಟಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಯುವಕ-ಯುವತಿಯರು ಭಾಗವಹಿಸಲು ಗೂಗಲ್ ಪೋರಂ ಲಿಂಕ್ https://tinyurl.com/bdafha6m ನಲ್ಲಿ ಮಾಹಿತಿಯನ್ನು ಭರ್ತಿಗೊಳಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8971749636 ಹಾಗೂ ಇಮೇಲ್ ವಿಳಾಸ dsmodvg@gmail.com ಅಥವಾ ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ 24, ಬಿ ಬ್ಲಾಕ್, ಪಿ.ಬಿ ರಸ್ತೆ, ದಾವಣಗೆರೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.