ಬೆಂಗಳೂರು: ರಾಜ್ಯದಲ್ಲಿ ನಿನ್ನೆ (ಮಾ.18) ಕೆಲ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಈ ಮಳೆ ಇನ್ನೂ ಎರಡ್ಮೂರು ದಿನ (ಮಾರ್ಚ್ 21 ರವರೆಗೆ) ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂಊರು, ಯಾದಗಿರಿ ಜಿಲ್ಲೆಗಳಲ್ಲಿ ಮಾ. 21 ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಮಳೆಯಾಗಲಿದ್ದು, ನಾಳೆ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.



