ದಾವಣಗೆರೆ: ಲಿಡ್‍ಕರ್ ನಿಗಮದಿಂದ ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಎವಿಕೆ ಕಾಲೇಜು ರಸ್ತೆಯ ರಂಗಮಹಲ್ ನಲ್ಲಿ ಏರ್ಪಡಿಸಲಾಗಿದೆ. ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್, ವ್ಯಾನಟಿ ಬ್ಯಾಗ್‍ಗಳು ಲಭ್ಯವಿದ್ದು, ಉತ್ಪನ್ನಗಳ ಮಾರಾಟ ದರದಲ್ಲಿ ಶೇ. 20 ರಷ್ಟು ರಿಯಾಯಿತಿ ಇದೆ. ಮಾರಾಟ ಮೇಳವು ಏ. 09 ರವರೆಗೆ ನಿತ್ಯ ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿದೆ. ಮಾಹಿತಿಗೆ ಮೊ. 9480886275 ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕ ಹಾಗೂ ಜಿಲ್ಲಾ ಸಂಯೋಜಕ ಎ.ಎಸ್. ರುದ್ರೇಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಶೇ. 20 ರಷ್ಟು ರಿಯಾಯಿತಿ ದರದಲ್ಲಿ ಚರ್ಮವಸ್ತುಗಳ ಪ್ರದರ್ಶನ, ಮಾರಾಟ ಮೇಳ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment