ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಭಾವಂತ ಗಂಡು ಮಕ್ಕಳಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರಲ್ಲಿ 2022-23ನೇ ಸಾಲಿನಲ್ಲಿ 8ನೇ ತರಗತಿಗೆ ಸೇರಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಏ.16 ರಂದು ಬೆಳಿಗ್ಗೆ 10 ಗಂಟೆಗೆ ರಾಮಕೃಷ್ಣ ವಿದ್ಯಾಶಾಲೆ ಯಾದವಗಿರಿ ಮೈಸೂರು ಇಲ್ಲಿ ಆಯ್ಕೆಗಾಗಿ ಪ್ರವೇಶ ಪರೀಕ್ಷೆ ಜರುಗಲಿದ್ದು, ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ಚನ್ನಗಿರಿ ಅಥವಾ ದಾವಣಗೆರೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಅರ್ಜಿ ಹಾಕಿದ ಪ್ರತಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಠಡಿ ಸಂಖ್ಯೆ 37, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಏ.05 ರೊಳಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.



