ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಶಾಮನೂರು ರುದ್ರಭೂಮಿಯಲ್ಲಿ ನೂತನವಾಗಿ ವಿದ್ಯುತ್ ಚಿತಾಗಾರ ನಿರ್ಮಿಸಲಾಗಿದೆ. ಈ ಚಿತಾಗಾರ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗಿದೆ. ಸಾರ್ವಜನಿಕರು ಸೇವಾ ಶುಲ್ಕ ರೂ.1500 ಪಾವತಿಸಿ, ವಿದ್ಯುತ್ ಚಿತಾಗಾರದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.