ದಾವಣಗೆರೆ: ಅಕ್ರಮವಾಗಿ ಇರಿಸಲಾಗಿದ್ದ ಅಡುಗೆ ಗ್ಯಾಸ್ ಸಿಲಿಂಡರ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ರೀಫಿಲಿಂಗ್ ಮೋಟರ್‍ನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಕಳೆದ ಜೂನ್ 26 ರಂದು ಪತ್ತೆ ಮಾಡಿ, ಜಪ್ತಿ ಮಾಡಿದ್ದು, ಈ ಪೈಕಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ರೀಫಲಿಂಗ್ ಮೋಟಾರ್ ಅನ್ನು ತಾಲ್ಲೂಕು ಕಚೇರಿ ಆವರಣದಲ್ಲಿ ಏ.08 ರಂದು ಮಧ್ಯಾಹ್ನ 12 ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.
ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ನರಸರಾಜಪೇಟೆ 4ನೇ ಕ್ರಾಸ್ ಕನ್ಸರ್ವೆನ್ಸಿಯ ಖಾಲಿ ಜಾಗದಲ್ಲಿರುವ ಶೆಡ್‍ನ ಮುಂಭಾಗದಲ್ಲಿ ಸಮೀವುಲ್ಲಾ ಎಂಬುವರರ ಮನೆಯಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ವಿತರಿಸುವ ಅಡುಗೆ ಗ್ಯಾಸ್ ಸಿಲಿಂಡರ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ರೀಫಿಲಿಂಗ್ ಮೋಟರ್‍ನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಕಳೆದ ಜೂನ್ 26 ರಂದು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದರು. ಈ ಪೈಕಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ರೀಫಿಲಿಂಗ್ ಮೋಟರ್‍ನ್ನು ಸಹಾಯಕ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಇಲಾಖೆ ತಾಲ್ಲೂಕು ಕಚೇರಿ ಆವರಣ ದಾವಣಗೆರೆ ಇಲ್ಲಿ ಏ.08 ರಂದು ಮಧ್ಯಾಹ್ನ 12 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು.
ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.