ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು (ಡಿಎ) ಶೇ.3ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ಡಿಎ ಶೇ.31ರಿಂದ ಶೇ.34ಕ್ಕೆ ಹೆಚ್ಚಳವಾಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ತುಟ್ಟಿಭತ್ಯೆ ಶೇ.31ರಿಂದ ಶೇ.34ಕ್ಕೆ ಹೆಚ್ಚಿಸಿದೆ. ಕೇಂದ್ರ ನೌಕರರಿಗೆ ಏಪ್ರಿಲ್ ತಿಂಗಳ ವೇತನದೊಂದಿಗೆ ಹೊಸ ತುಟ್ಟಿಭತ್ಯೆಯ ಸಂಪೂರ್ಣ ಪಾವತಿಯನ್ನು ನೀಡಲಾಗುತ್ತದೆ.
ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಡಿಎ ಹೆಚ್ಚಳವು ಸ್ಥಗಿತಗೊಂಡಿತ್ತು. ನೌಕರರ ವೇತನದ ಮೇಲೆ ಹಣದುಬ್ಬರದ ಪರಿಣಾಮವನ್ನು ಸರಿದೂಗಿಸಲು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಪಾವತಿಸಲಾಗುತ್ತದೆ. ಇದು ಉದ್ಯೋಗಿಗಳು ಮತ್ತು ಪಿಂಚಣಿದಾರರಿಬ್ಬರಿಗೂ ಅನ್ವಯಿಸುತ್ತದೆ. ತುಟ್ಟಿಭತ್ಯೆ ಹೆಚ್ಚಳದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವರ್ಷಕ್ಕೆ 10,000 ಕೋಟಿ ರೂಪಾಯಿ ಹೊರೆ ಬೀಳಲಿದೆ. ಈ ಕ್ರಮದಿಂದ 47 ಲಕ್ಷ ಉದ್ಯೋಗಿಗಳು ಮತ್ತು 68 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.