ದಾವಣಗೆರೆ: ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದ ಕುಂದು-ಕೊರತೆ ಸಭೆಯನ್ನು ಏ. 07 ರಂದು ಸಂಜೆ 04 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಗೆ ಹಾಜರಾಗುವಂತೆ ಹಾಗೂ ಪ.ಜಾತಿ/ಪ.ವರ್ಗಗಳ ಜನಾಂಗದವರು ತಮ್ಮ ಕುಂದು-ಕೊರತೆಗಳ ಕುರಿತು ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.