ಬೆಂಗಳೂರು: ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಯಲ್ಲಿ ಎರಡು ದಿನ ಮಳೆಯಾಗುವ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇದಡ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ಬೆಂಗಳೂರು, ಮೈಸೂರು,ಕೊಡಗು, ಹಾಸನ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



