ವಿಜಯಪುರ: ಕ್ರೀಡಾ ಇಲಾಖೆಯಿಂದ ನಿರ್ಮಿಸಿದ್ದ ಈಜುಕೊಳವನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಜುವ ಮೂಲಕ ಉದ್ಘಾಟಿಸಿದರು.
ನಗರದ ಕನಕದಾಸ ಬಡಾವಣೆಯಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯಿಂದ ಒಳಾಂಗಣ ಕ್ರೀಡಾಂಗಣವನ್ನು ಇಂದು ಉದ್ಘಾಟಿಸಲಾಯಿತು.
ರಿಬ್ಬನ್ ಕತ್ತರಿಸಿದ ಬಳಿಕ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಜೊತೆ ಈಜುಗೊಳಕ್ಕೆ ಇಳಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಈಜಿದರು.