ಡಿವಿಜಿ ಸುದ್ದಿ, ದಾವಣಗೆರೆ: ಮಾಗನೂರು ಬಸಪ್ಪ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಆರ್. ರಾಘವೇಂದ್ರ ಅವರಿಗೆ ಕುವೆಂಪು ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದಿಂದ ಪಿ.ಎಚ್ ಡಿ ಪದವಿ ಲಭಿಸಿದೆ.
ಕುವೆಂಪು ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದಲ್ಲಿ ‘ಕಾಟನ್ ಮಿಲ್ ಮುಚ್ಚುವಿಕೆಯಿಂದ ಕಾರ್ಮಿಕ ಕುಟುಂಬದ ಮೇಲೆ ಆದ ಪ್ರಭಾವ: ಒಂದು ಸಮಾಜಶಾಸ್ತ್ರೀಯ ಅಧ್ಯಯನ’ ಕುರಿತು ಜಾನಪದ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ..ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾ ಪ್ರಬಂಧ ಮಂಡಿಸಿದ್ದರು.



