ದಾವಣಗೆರೆ: ಬುಲೆರೋ ವಾಹನ ಯುವಕನ ಮೇಲೆ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಿಹರ ಪಟ್ಟಣದ ಶ್ರೀಕಾಂತ ಟಾಕೀಸ್ ಮುಂಭಾಗ ನಡೆದಿದೆ.
ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ನವೀನ್ (20) ಎಂಬಾತ ಮೃತಪಟ್ಟ ಯುವಕ. ಇಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಬುಲೆರೋ ವಾಹನ ಪಾದಚಾರಿ ಮೃತ ನವೀನ್ ಮೇಲೆ ಹರಿದಿದೆ. ಇದರ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೀನ್ ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.



