ರಾಯಚೂರು: ಎರಡು ಕಾರುಗಳು ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಮರೇಶ್ (30), ಗೋವಿಂದ್ (35) ದೇವರಾಜ್ (34)ಮೃತಪಟ್ಟವರಾಗಿದ್ದಾರೆ.
ಮದುವೆಗೆಂದು ಹೋಗುತ್ತದ್ದಾಗ ಈ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಗೊಲ್ಲಪಲ್ಲಿ ಸಮೀಪ ನಡೆದಿದೆ. ಬೆಂಗಳೂರು ಕಡೆಯಿಂದ ಯಾದಗಿರಿಗೆ ಹೋಗ್ತಿದ್ದ ಕಾರಿನಲ್ಲಿದ್ದ ಐವರು ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಕಾರಿನಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ.



