ಉಡುಪಿ: ಹಿಜಾಬ್ಗೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಇಬ್ಬರು ಹಿಜಾಬ್ ಪರ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಹಾಗೂ ರೇಶಂ ಪರೀಕ್ಷೆ ಬರೆಯದೇ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದಾರೆ.
ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದೆ. ಸಮವಸ್ತ್ರ ಧರಿಸಿ ಬಂದವರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಈ ಹಿಂದೆಯೇ ಸರ್ಕಾರ ಆದೇಶ ಹೊರಡಿಸಲಾಗಿತ್ತು. ಹೀಗಿದ್ದರೂ ಕೆಲವೆಡೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದು, ಮನವೊಲಿಕೆಯ ಬಳಿಕ ಕೆಲವರು ಹಿಜಾಬ್ ಕಳಚಿಟ್ಟು ಪರೀಕ್ಷೆ ಬರೆದರು. ಆದರೆ, ಉಡುಪಿಯ ಇಬ್ಬರು ವಿದ್ಯಾರ್ಥಿನಿಯರು, ಹಿಜಾಬ್ ಧರಿಸಲು ಅವಕಾಶ ನೀಡದಕ್ಕೆ ಪರೀಕ್ಷಾ ಕೇಂದ್ರದಿಂದ ಹೊರ ನಡೆದರು.
ಕೋರ್ಟ್ ಆದೇಶ ಹಾಗೂ ಸರ್ಕಾರದ ಸೂಚನೆ ಇದ್ದರೂ ವಿದ್ಯಾರ್ಥಿನಿಯರು ಮಾತ್ರ ನಿಯಮ ಪಾಲನೆ ಮಾಡಲು ನಿರಕರಿಸಿದ್ದಾರೆ. ಹಿಜಾಬ್ ಧರಿಸಿ ಬಂದವರಿಗೆ ಅದನ್ನು ತೆಗೆದಿಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಪರೀಕ್ಷೆ ಬರೆದ ಬಳಿಕ ಮತ್ತೆ ಹಿಜಾಬ್ ಧರಿಸಿ ಹೋಗಬಹುದು. ಆದರೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂಬ ಹಠಕ್ಕೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಅವಕಾಶ ನೀಡದಿದ್ದಕ್ಕೆ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದಾರೆ. ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.