ದಾವಣಗೆರೆ: ರಾಹುಲ್ ಗಾಂಧಿ ಅವರು ಮಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲಲೇ ಬೇಕು ಎಂದು ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅವಧಿಗೂ ಮುನ್ನ ಚುನಾವಣೆ ಆಗುವುದಿಲ್ಲ. ಆರು ತಿಂಗಳ ಮೊದಲೇ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗಲಿದೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸುತ್ತಾರೆ.ಹುಬ್ಬಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ. ಅಭಿಷೇಕ್ ಹಿರೇಮಠ ಯಾರು ಎಂದು ಪ್ರಶ್ನಿಸಿದ ಅವರು, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದರು.