ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಏ.29 ರಂದು ಉದ್ಯೋಗ ಮೇಳ ಆಯೋಜಿಸಿದೆ. ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51 ರಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಪಿಯುಸಿ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅಗತ್ಯ ದಾಖಲಾತಿಯೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.9.30 ಕ್ಕೆ ವಿದ್ಯಾರ್ಹತೆ ದಾಖಲಾತಿ, ಸ್ವ- ವಿವರ, ಆಧಾರ್ ಕಾರ್ಡ್ ನೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ 6361550016,7406323294 ಸಂಪರ್ಕಿಸಿ.



