ದಾವಣಗೆರೆ: ವೃದ್ಧ ದಂಪತಿ ಭದ್ರಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪಾಡಲು ಹೋದ ಯುವಕನೂ ಕೂಡ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ.ವೃದ್ಧರು ಚನ್ನಗಿರಿ ತಾಲೂಕಿನ ಅಂಚಿನ ಸಿದ್ದಾಪುರ ಬಳಿ ನೀರಿಗೆ ಹಾರಿದ್ದಾರೆ. ಅಲ್ಲೇ ಇದ್ದ ಯುವಕ ಕಾಪಾಡಲು ಹೋಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ವೃದ್ಧ ದಂಪತಿಯ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಯುವಕ ದೇಹ ಇನ್ನೂ ಪತ್ತೆಯಾಗಿಲ್ಲ.
ಯುವಕನ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆದಿದೆ. ವೃದ್ಧ ದಂಪತಿಯ ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



