ತುಮಕೂರು: ಜಿಲ್ಲೆಯ ಚಿಕ್ಕ ಶೆಟ್ಟಿಕೆರೆ ಬಳಿ ಲಾರಿ- ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ವಧು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರದ ನವ ವರ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಸಾವನ್ನಪ್ಪಿದ್ದಾರೆ. ಕಳೆದ ವಾರದ ಪ್ರಸನ್ನಕುಮಾರ್ ಅವರಿಗೆ ವಿವಾಹವಾಗಿತ್ತು.ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಹೋಗುವಾಗ ಈ ಘಟನೆ ಸಂಭವಿಸಿದೆ.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕಾರಿನಲ್ಲಿಯೇ ಇದ್ದ ನವ ವಧು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



