ದಾವಣಗೆರೆ: ನಗರದ ನಿಟುವಳ್ಳಿಯ ಜಿಮ್ ಟ್ರೈನರ್ ಧನ್ಯಕುಮಾರ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ಕೆಟಿಜೆ ನಗರದ ರವಿ(24) ಲೆನಿನ್ ನಗರದ ಮಲ್ಲಿಕಾರ್ಜುನ (25) ಸುದೀಪ್ (21) ಬಂಧಿತವ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬೈಕ್ ಮತ್ತು ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ ವಶಕ್ಕೆ ಪಡೆದಿದ್ದಾರೆ. ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗದ ಹಾಲಮ್ಮನ ತೋಪಿನ ಬಳಿಯ ಬೇವಿನಹಳ್ಳಿ ತಾಂಡ ಹತ್ತಿರ ಮೂರು ದಿನದ ಹಿಂದೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಧನ್ಯಕುಮಾರ್ ಕೊಲೆಯಾಗಿತ್ತು. ಇದೀಗ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರೇ ಕೊಲೆ ಮಾಡಿರುವುದು ಪತ್ತೆಯಾಗಿದೆ.
ಬುಧವಾರ ರಾತ್ರಿ ಉಚ್ಚಂಗಿದುರ್ಗಕ್ಕೆ ಹೋಗಿ ಬರುವುದಾಗಿ ಸ್ನೇಹಿತರ ಬಳಿ ಧನ್ಯಕುಮಾರ್ ಹೋಗಿದ್ದನು. ಉಚ್ಚಂಗಿದುರ್ಗದ ಹಾಲಮ್ಮ ತೋಪಿನಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಧನ್ಯಕುಮಾರ್ ವಶ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.



