ದಾವಣಗೆರೆ: ಬೆಳಗ್ಗೆ ಎದ್ದು ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಚುಚ್ಚಿಕೊಂಡು ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಮೊಬೈಲ್ ಗೇಮ್ ಗೀಳು ಪ್ರಮುಖ ಕಾರಣ ಎಂಬುದು ತನಿಖೆಯಿಂದ ಗೊತ್ತಾಗಿದೆ. ಅದರಲ್ಲೂ ಆತ್ಮಹತ್ಯೆಗೆ ಪ್ರೇರಣೆ ನೀಡುವ ಗೇಮ್ ಗೀಳಿಗೆ ಬಿದ್ದಿದ್ದ ವಿದ್ಯಾರ್ಥಿ, ಗೇಮ್ ಪ್ರೇರಣೆಯಿಂದ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ನಗರದ ಅರುಣಾ ಸರ್ಕಲ್ ಬಳಿಯ ಪಿಸಾಳೆ ಕಾಂಪೌಂಡ್ ನಲ್ಲಿ ಮಿಥುನ್(18) ಎಂಬ ವಿದ್ಯಾರ್ಥಿ ಎರಡನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟದ್ದ. ಬೆಳಿಗ್ಗೆ ಪರೀಕ್ಷೆಗೆ ಹೋಗಬೇಕಾಗಿತ್ತು. ಆದರೆ, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಸಾವನ್ನಪ್ಪುವ ಮೊದಲು ಆತ್ಮಹತ್ಯೆಗೆ ಪ್ರೇರಣೆ ನೀಡುವ ಗೇಮ್ ನೀಡುತ್ತಿದ್ದ. ಈ ಗೇಮ್ ನೋಡುವ ಚಟ ವಿದ್ಯಾರ್ಥಿಗಳನ್ನ ಬಲಿಪಡೆಯುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲದಿಂದ ವರದಿ ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದ್ದಾರೆ.
ಸಾವಿಗೂ ಮೊದಲು ಮಿಥುನ್ ಆತ್ಮಹತ್ಯೆಗೆ ಪ್ರೇರಣೆ ನೀಡುವ ಭಯಾನಕ ಗೇಮ್ ಗಳನ್ನು ಮೊಬೈಲ್ ನಲ್ಲಿ ವೀಕ್ಷಿಸಿದ್ದ ನನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ ಎಂದೂ ಡೆತ್ನೋಟ್ ಬರೆದು ದೇಹದ ವಿವಿಧ ಕಡೆ ಚಾಕುವಿನಿಂದ ಇರಿದುಕೊಂಡು, ಬಳಿಕ ಏಪ್ರಿಲ್ 23 ರಂದು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದನು.