ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನಾಳೆ (ಮೇ 5) ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ನಾಳೆ ಬೆಂಗಳೂರಿನಿಂದ ಹೊರಟು, ರಾತ್ರಿ 08 ಕ್ಕೆ ದಾವಣಗೆರೆ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.ಮೇ.06 ರಂದು ಬೆಳಿಗ್ಗೆ 9.30 ಗಂಟೆಗೆ ಹರಿಹರ ತಾಲ್ಲೂಕು ಹರಳಹಳ್ಳಿ ಗ್ರಾಮದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆ. 11.30 ರಿಂದ ಮ.2.30 ರವರೆಗೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರಗುವ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮ.02.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



