ದಾವಣಗೆರೆ: ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ನಗರದ ನಿಜಲಿಂಗಪ್ಪ ಬಡಾವಣೆಯ ಜಿಲ್ಲಾ ಕಾಂಗ್ರೆಸ್ ಸಮುದಾಯ ಭವನದಲ್ಲಿ ಮೇ.15ರಂದು 16 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ತಿಳಿಸಿದ್ದಾರೆ.
ಈ ಸ್ಪರ್ಧೆಯು ಸ್ವಿಸ್ ಲೀಗ್ ಮಾದರಿಯಲ್ಲಿ ನಡೆಯಲಿದ್ದು ಲೀಗ್ನಲ್ಲಿ 7 ಸುತ್ತುಗಳು ನಡೆಯಲಿವೆ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳು 7 ಸುತ್ತುಗಳಲ್ಲಿ ಆಡಲಿದ್ದಾರೆ. ಸಂಜೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಮಹಾನಗರ ಪಾಲಿಕೆ ಮಾಜಿ ವಿಪಕ್ಷ ನಾಯಕ ಎ ನಾಗರಾಜ್ ಬಹುಮಾನ ವಿತರಣೆ ಮಾಡಲಿದ್ದಾರೆ.
ಈ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಹತ್ತು ಸ್ಥಾನಗಳಿಗೆ ಟ್ರೋಫಿ ಮತ್ತು ನಗದು ಬಹುಮಾನವನ್ನು ಹಾಗೂ 8ವರ್ಷದ ಮಕ್ಕಳಿಗೆ 10 ವರ್ಷದ ಮಕ್ಕಳಿಗೆ 12 ವರ್ಷದ ಮಕ್ಕಳಿಗೆ ತಲಾ 5 ವಿಶೇಷ ಬಹುಮಾನವನ್ನು ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರ ವನ್ನು ವಿತರಿಸಲಾಗುವುದು. ಸ್ಪರ್ಧೆಗೆ ಭಾಗವಹಿಸುವರು ದಿನಾಂಕ ಹದಿನೈದು ರ ಭಾನುವಾರ ಬೆಳಗ್ಗೆ ಹತ್ತು ಗಂಟೆಯ ಒಳಗೆ ಹೆಸರನ್ನು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗೆ 9945613469, 7259310197 ಸಂಪರ್ಕಿಸಿ.



