ದಾವಣಗೆರೆ: ನಿರಂತರ ಜ್ಯೋತಿ ಅಕ್ರಮ ಪ್ರಕರಣದಲ್ಲಿ ಹರಿಹರ ತಾಲೂಕಿನ ಎರಡು ಫೀಡರ್ ಗಳಲ್ಲಿ ತನಿಖೆ ನಡೆಸಿದ್ದೇವೆ. ಅದು ಸಮಾಧಾನ ತಂದಿಲ್ಲ. ಉಳಿದ 29 ಫೀಡರ್ ಗಳ ತನಿಖೆ ಮಾಡುವುದಕ್ಕೆ ಆದೇಶಿಸಿದ್ದೇನೆ. ನಿರಂತರ ಜ್ಯೋತಿ ಅಕ್ರಮ ಪ್ರಕರಣದಲ್ಲಿ ಯಾರನ್ನು ರಕ್ಷಿಸುವುದಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ,ನಾನು ಇಲಾಖೆ ಸಚಿವನಾದ ಮೇಲೆ 100 ಕ್ಕೂ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇನೆ. ಅದೇ ರೀತಿ ಹರಿಹರದಲ್ಲೂ ಸಮಗ್ರ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.



