ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತಕ್ಕೆ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಮೇ.25 ರಿಂದ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ.30 ಕೊನೆಯ ದಿನಾಂಕವಾಗಿದ್ದು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ. ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.sw.kar.nic.in ಗೆ ಅಥವಾ ದಾವಣಗೆರೆ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಬೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



