ಬೆಂಗಳೂರು: ನಾಳೆ(ಮೇ 19) ಮಧ್ಯಾಹ್ನ 12.30ಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ವ ಮಾರ್ಚ್ 28 ರಿಂದ ಏ.11ರ ವರೆಗೆ 2021-22ನೆ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿದೆ.
ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಾಳೆ 12.30ಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು 3446 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ಸುಮಾರು 243 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 63,796 ಶಿಕ್ಷಕರು ಭಾಗಿಯಾಗಿದ್ದರು. ಫಲಿತಾಂಶ ವೀಕ್ಷಿಸಲು ವೆಬ್ ಸೈಟ್ http://kseeb.kar.nic.in, http://sslc.karnataka.gov.in, http://karresults.nic.in ವೀಕ್ಷಿಸಬಹುದು.