ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆಯಾಗುತ್ತಿದೆ. ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಮಳೆಯಾಗಿದ್ದು, ಭಾರೀ ಮಳೆಗೆ ಹಳ್ಳ-ಕೊಳ್ಳ, ಜಮೀನುಗಳಲ್ಲಿ ನೀರು ತುಂಬಿ ಹರಿಯುತ್ತದೆ.
ಮಳೆ ನೀರಿನಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಶಾಲೆಗಳಲ್ಲಿ ನೀರು ತುಂಬಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ಕಷ್ಟವಾಗುತ್ತಿದೆ. ಈ ಹಿನ್ನೆಲೆ ನಾಳೆ (ಮೇ. 20) ಜಿಲ್ಲೆಯ ಅನುದಾನಿತ, ಅನುದಾನ ರಹಿತ ಸೇರಿ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.