ದಾವಣಗೆರೆ: ರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಿಂದ ಸಂಯೋಜನೆಗೊಂಡು, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ಬಿಎಸ್ ಎಸ್ ನರ್ಸಿಂಗ್ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಪೇಷೆಂಟ್ ಕೇರ್ ನರ್ಸಿಂಗ್ 2 ವರ್ಷದ ಕೋರ್ಸಿಗೆ ಎಸ್ಸೆಸ್ಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸದರಿ ನರ್ಸಿಂಗ್ ಕೋರ್ಸಿಗೆ ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು ಅಥವಾ ಪಿಯುಸಿ ಹಾಗೂ ಯಾವುದೇ ಪದವಿಯಲ್ಲಿ ವಿದ್ಯಾಭ್ಯಾಸ ಮಾಡಿ, ಫೇಲ್ ಅಥವಾ ಪಾಸ್ ಆಗಿರುವವರೂ ಸಹ ಪ್ರವೇಶ ಪಡೆಯಲು ಅವಕಾಶವಿದ್ದು ಹಾಗೂ ಈಗಾಗಲೇ ತರಬೇತಿ ಪಡೆಯದೆ ಖಾಸಗಿ ಆಸ್ಪತ್ರೆಗಳಲ್ಲಿ ನರ್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವವರು ಸಹ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ತರಬೇತಿ ಪಡೆದ ನಂತರ ಖಾಸಗಿ ಆಸ್ಪತ್ರೆಗಳಲ್ಲಿ, ಅರೆ ಸರ್ಕಾರಿ ಆಸ್ಪತ್ರೆಗಳಲ್ಲಿ, ನರ್ಸಿಂಗ್ ಹೋಂಗಳಲ್ಲಿ, ಕ್ಲಿನಿಕ್‌ಗಳಲ್ಲಿ ರೆಸಿಡೆನ್ಷಿಯಲ್ ಸ್ಕೂಲ್‌ಗಳಲ್ಲಿ, ಕ್ರೀಡಾ ತರಬೇತಿ ಕೇಂದ್ರಗಳಲ್ಲಿ, ವೃದ್ಧಾಶ್ರಮಗಳಲ್ಲಿ, ನರ್ಸ್ಗಳಾಗಿ ಸೇವೆ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಬಿಎಸ್‌ಎಸ್ ನರ್ಸಿಂಗ್ ಕಾಲೇಜು, ಕುರುಬರ ಹಾಸ್ಟೆಲ್ ಕಾಂಪ್ಲೆಕ್ಸ್, 2/ನೇ ಮಹಡಿ, ಜಯದೇವ ಸರ್ಕಲ್ ಹತ್ತಿರ ದಾವಣಗೆರೆ, ಮೊ.ನಂ.7022936433, 9886678178 ಸಂಪರ್ಕಿಸಿ, ಮೇ 31ರೊಳಗೆ ಪ್ರವೇಶ ಪಡೆದುಕೊಳ್ಳಲು ಅವಕಾಶವಿದೆ ಎಂದು ಕಾಲೇಜಿನ ಕಾರ್ಯದರ್ಶಿ ಅಣಬೇರು ಶಿವಮೂರ್ತಿ ತಿಳಿಸಿದ್ದಾರೆ.



