ದಾವಣಗೆರೆ: ಪ್ರತಿ ಬುಧವಾರದಂದು ಕೋವ್ಯಾಕ್ಸಿನ್, ಕೋವಿಶೀಲ್ಡ್, ಕಾರ್ಬಿವ್ಯಾಕ್ಸ್, ಬೂಸ್ಟರ್ ಡೋಸ್ಗಳೊಂದಿಗೆ ಲಸಿಕಾ ಮೇಳ ಆಯೋಜಿಸಲಾಗಿದೆ. ದಾವಣಗೆರೆ ತಾಲ್ಲೂಕಿನ ನಗರ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಯೋಗದೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



